Breaking News

Vijay Deverakonda Rashmika Mandanna engagement

Rashmika Mandanna Engagement: ಫೆಬ್ರವರಿಯಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ?

Rashmika Mandanna – Vijay Deverakonda Engagement in Feb?: ಫೆಬ್ರವರಿಯಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ?

ಖ್ಯಾತ ನಟರಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ.

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳಿವೆ. ಆದಾಗ್ಯೂ, ಇಬ್ಬರು ನಟರು ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿಲ್ಲ. ಇತ್ತೀಚಿನ ನ್ಯೂಸ್ 18 ತೆಲುಗು ವರದಿಯ ಪ್ರಕಾರ, ಫೆಬ್ರವರಿ ಎರಡನೇ ವಾರದಲ್ಲಿ ಇಬ್ಬರೂ ತಮ್ಮ ನಿಶ್ಚಿತಾರ್ಥದ ಬಗ್ಗೆ ಘೋಷಣೆ ಮಾಡಲು ಆಲೋಚಿಸುತ್ತಿದ್ದಾರೆ ಎಂದು ತಿಳಿಸಿಯಲಾಗಿದೆ. ಆದರೆ, ಈ ಬಗ್ಗೆ ರಶ್ಮಿಕಾ ಮಂದಣ್ಣ ಅಥವಾ ವಿಜಯ್ ದೇವರಕೊಂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

 

ಈ ಹಿಂದೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಎಂಬ ಎರಡು ತೆಲುಗು ಹಿಟ್ ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ. ಇಬ್ಬರ ನಡುವೆ ಒಳ್ಳೆಯ ಸಂಬಂಧ ಇದೆ ಎಂದು ವ್ಯಾಪಕವಾಗಿ ವರದಿಯಾಗಿದೆ. ಕಳೆದ ಕೆಲವು ದಿನಗಳಿಂದ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥದ ಬಗ್ಗೆ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇತ್ತೀಚೆಗೆ ರಶ್ಮಿಕಾ ಹೈದರಾಬಾದ್‌ನಲ್ಲಿರುವ ವಿಜಯ್ ದೇವರಕೊಂಡ ಮನೆಯಲ್ಲಿ ದೀಪಾವಳಿ ಆಚರಿಸಿದರು. ಇಬ್ಬರೂ ಜೊತೆಯಾಗಿ ಪ್ರವಾಸಕ್ಕೆ ಹೋಗುವುದು ಸಹ ಕಂಡುಬಂದಿದೆ.

ಇನ್ನು ತಮ್ಮ ತಮ್ಮ ವೃತ್ತಿ ಜೀವನಕ್ಕೆ ಸಂಭಂದಿಸಿದಂತೆ, ರಶ್ಮಿಕಾ ಮಂದಣ್ಣ ಅವರು ರಣಬೀರ್ ಕಪೂರ್ ಅವರ ‘ಅನಿಮಲ್’ ಚಿತ್ರದ ಮೂಲಕ ಬ್ಲಾಕ್ಬಸ್ಟರ್ ನೀಡಿದ್ದಾರೆ, ಈ ಚಿತ್ರ ವಿಶ್ವದಾದ್ಯಂತ ಸುಮಾರು 900 ಕೋಟಿ ರೂ ಗಳಿಸಿದೆ. ಪ್ರಸ್ತುತ ಅಲ್ಲು ಅರ್ಜುನ್ ಅವರ ‘ಪುಷ್ಪ: ದಿ ರೂಲ್’ ಚಿತ್ರೀಕರಣದಲ್ಲಿದ್ದಾರೆ ರಶ್ಮಿಕಾ. ಅದೇ ರೀತಿ ಅವರು ನಟಿಸಲಿರುವ ‘ರೇನ್‌ಬೋ’, ‘ದಿ ಗರ್ಲ್‌ಫ್ರೆಂಡ್’ ಮತ್ತು ‘ಚಾವಾ’ ಚಿತ್ರಗಳು ನಿರ್ಮಾಣದ ವಿವಿಧ ಹಂತಗಳಲ್ಲಿವೆ.

ವಿಜಯ್ ದೇವರಕೊಂಡ ಅವರು ಪರಶುರಾಮ್ ಪೆಟ್ಲಾ ಅವರ ‘ಫ್ಯಾಮಿಲಿ ಸ್ಟಾರ್’ ಮತ್ತು ನಿರ್ದೇಶಕ ಗೌತಮ್ ತಿನ್ನನೂರಿ ಅವರ ‘ವಿಡಿ 12’ ಚಿತ್ರಗಳಲ್ಲಿ ಬ್ಯುಸಿ ಆಗಿದ್ದರೆ.

ಗಮನಿಸಬೇಕಾದ ಅಂಶವೆಂದರೆ, ಸದ್ಯಕ್ಕೆ, ಈ ನಿಶ್ಚಿತಾರ್ಥದ ವರದಿಗಳು ದೃಢೀಕರಿಸಲ್ಪಟ್ಟಿಲ್ಲ ಮತ್ತು ಈ ನಟರಿಂದ ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *